ನವದೆಹಲಿ: ಸುಧೀರ್ಘ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆ ಮುಕ್ತಾಯವಾಗುತಿದ್ದಂತೆ ವಿವಿಧ ವಾಹಿನಿಗಳು, ಸಂಸ್ಥೆಗಳಿಂದ ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಲಾಗಿದೆ.
ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹೀಗೆ ಬಹುತೇಕ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿವೆ. ಈ ಸಮೀಕ್ಷೆಗಳಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ನಿರೀಕ್ಷೆ ಇದೆ ಎಂದು ಹೇಳುತ್ತಿದ್ದಂತೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳ ಕಾರ್ಯಕರ್ತರು ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮೊದಲೇ ಸಂಭ್ರಮಾಚರಣೆ ನಡೆಸಿದ್ದಾರೆ.
ಜೂನ್ 4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು, ಮುಖಂಡರ ಸಂಭ್ರಮ ಮುಗಿಲು ಮುಟ್ಟಿದೆ. ದೇಶದ ವಿವಿಧೆಡೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗಿದೆ.