ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಮೀಕ್ಷೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಬಿಪಿಎಲ್ ಕುಟುಂಬದ ಮನೆ ಒಡೆಯ ಮೃತಪಟ್ಟ ಪ್ರಕರಣಗಳಲ್ಲಿ ಕುಟುಂಬದ ಉಳಿದ ಸದಸ್ಯರಿಗೆ ಪಡಿತರ ಸಿಗದ ಹಿನ್ನೆಲೆಯಲ್ಲಿ ಸಮಸ್ಯೆ ನಿವಾರಣೆ ಸಂಬಂಧ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇಂಥ ಪ್ರಕರಣಗಳಲ್ಲಿ ಕಾರ್ಡ್ ದುರ್ಬಳಕೆ ಆಗುತ್ತಿರುವ ಬಗ್ಗೆ ದೂರುಗಳಿವೆ. ಸಮೀಕ್ಷೆ ನಡೆಸುವುದರಿಂದ ಇಂತಹ ದುರ್ಬಳಕೆಗೆ ಕಡಿವಾಣ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೆಲ ಕುಟುಂಬಗಳ ಮನೆ ಒಡೆಯರು ಮೃತಪಟ್ಟು ವರ್ಷಗಳೇ ಕಳೆದಿದ್ದು, ಈ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮೀಕ್ಷೆ ನಡೆಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಡ್ ದಾರರು ಮೃತಪಟ್ಟಿದ್ದರೂ ಅವರ ಹೆಸರು ಉಳಿದುಕೊಂಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದಾರೆ.