ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡುವಂತೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದಿಂದ ಆರೋಗ್ಯ ಸರ್ವೆ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರೊಂದಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಇವುಗಳ ಜೊತೆಗೆ ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡುವಂತೆ ಆದೇಶ ಹೊರಡಿಸಲಾಗಿದೆ.
ಹಿಂದೆ ಕೊರೋನಾ ಭಾರೀ ಏರಿಕೆಯಾದ ಸಂದರ್ಭದಲ್ಲಿಯೂ ಮನೆ ಮನೆ ಸರ್ವೇ ಕೈಗೊಳ್ಳಲಾಗಿದ್ದು, ಈಗ ಮತ್ತೆ ಸರ್ವೇ ಕೈಗೊಂಡು ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.