alex Certify BIG BREAKING: ನೈಟ್ ಕರ್ಫ್ಯೂ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ, ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೈಟ್ ಕರ್ಫ್ಯೂ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ, ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡುವಂತೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದಿಂದ ಆರೋಗ್ಯ ಸರ್ವೆ ಕುರಿತಾಗಿ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯದಲ್ಲಿ ಕೊರೋನಾ, ಒಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿವೆ. ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರೊಂದಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಇವುಗಳ ಜೊತೆಗೆ ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಹಿಂದೆ ಕೊರೋನಾ ಭಾರೀ ಏರಿಕೆಯಾದ ಸಂದರ್ಭದಲ್ಲಿಯೂ ಮನೆ ಮನೆ ಸರ್ವೇ ಕೈಗೊಳ್ಳಲಾಗಿದ್ದು, ಈಗ ಮತ್ತೆ ಸರ್ವೇ ಕೈಗೊಂಡು ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...