ಬೆಂಗಳೂರು: ಪ್ರಸಕ್ತ ಶಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಮನೆ ಮನೆ ಸಮೀಕ್ಷೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ.
ಮಕ್ಕಳನ್ನು ಗುರುತಿಸುವ ಮನೆ ಮನೆ ಸಮೀಕ್ಷೆ ನಡೆಸಲು ಸ್ವಸಹಾಯ ಗುಂಪುಗಳ ಸದಸ್ಯ ಮಹಿಳೆಯರನ್ನು ಗುರುತಿಸುವ ಕೆಲಸವನ್ನು ಜುಲೈ 19ರಂದೇ ನಡೆಸಬೇಕು. ಇದೇ 20, 22 ರ ನಡುವೆ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಭೆ ನಡೆಸಿ ಜುಲೈ 31ರೊಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
ಶಿಕ್ಷಣ ವಂಚಿತ ಮತ್ತು ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಕರೆತರಲು ಮತ್ತು ಆ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ವ್ಯಾಪ್ತಿಗೆ ಒಳಪಡಿಸಲು ಕ್ರಮ ವಹಿಸಲಾಗಿದೆ.