
ಚಿಕ್ಕಮಗಳೂರು: ಮೂಡಿಗೆರೆ ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸರ್ವೇ ಅಧಿಕಾರಿ ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಲಭ್ಯವಾಗಿದ್ದು, ಅದರಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವಕುಮಾರ್, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸರ್ವೆ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಮೂಡಿಗೆರೆ ಬಾಡಿಗೆ ಮನೆಯಲ್ಲಿಯೇ ಶಿವಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದೀಗ ಶಿವಕುಮಾರ್ ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ್ದಾಗಿ ಬರೆದಿದ್ದಾರೆ. ಹನಿಟ್ರ್ಯಾಪ್, ಕಿರುಕುಳ, ಬ್ಲ್ಯಾಕ್ ಮೇಲ್ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.