alex Certify ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ

ಬೆಳಗಾವಿ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.

ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು‌ ಮಾತನಾಡಿದರು.

ಇತ್ತೀಚಿನ ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತಹೊಂಡಿರುವುದರಿಂದ ನೀರು ಸರಿದ ಬಳಿಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು.

ಇದಲ್ಲದೇ ಹಾನಿಗೊಳಗಾಗಿರುವ ಒಟ್ಟಾರೆ 775 ಮನೆಗಳಿಗೂ  ಕೂಡ ಮಾರ್ಗಸೂಚಿ ಪ್ರಕಾರ ತಕ್ಷಣವೇ ಪರಿಹಾರವನ್ನು ನೀಡಬೇಕು ಎಂದು ಹೇಳಿದರು.

ಬೆಳೆಹಾನಿ ಕುರಿತು ಮೊದಲು ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ನೀರು ಸರಿದ ಬಳಿಕ ಕ್ಷೇತ್ರ ಭೇಟಿ ನೀಡಿ ನಿಯಮಾವಳಿ ಪ್ರಕಾರ ಹಾನಿ ಕುರಿತು ಸಮೀಕ್ಷೆ ಕೈಗೊಳ್ಳಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆಗಳು ಹಾಳಾಗಿದ್ದರೆ ಎನ್.ಆರ್.ಇ.ಜಿ. ಯೋಜನೆಯಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕು.ಈ ಬಾರಿ ಇದುವರೆಗೆ ಮಳೆಯಿಂದ ಹೆಚ್ಚಿನ ಪ್ರಮಾಣ ಆಗಿರುವುದಿಲ್ಲ. ಆದಾಗ್ಯೂ ಸಂಭವನೀಯ ಪರಿಸ್ಥಿತಿ ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಿದ್ಧತೆ‌ ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಡೀ ಜಿಲ್ಲಾಡಳಿತ ಸನ್ನದ್ಧವಾಗಿದೆ. ಕಾಳಜಿ ಕೇಂದ್ರ ಗುರುತಿಸುವಿಕೆ, ರಕ್ಷಣಾ ತ‌ಂಡಗಳ ನಿಯೋಜನೆ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...