ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆ ಶಂಕೆ ವ್ಯಕ್ತವಾಗಿದ್ದು, ಸುಮಾರು 19 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಾಜರಕೋಟ ಗ್ರಾಮದಲ್ಲಿ ನಿನ್ನೆ 19 ಮಂದಿಗೆ ಇದ್ದಕ್ಕಿದ್ದ ಹಾಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ವಾಂತಿಭೇದಿಯಿಂದ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕಲುಷಿತ ನೀರು ಸೇವನೆಯೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಚಿತ್ರದುರ್ಗದಲ್ಲಿ ಕಲುಷಿತ ನೀರು ಅಸ್ವಸ್ಥಗೊಂಡು 7 ಮಂದಿ ಮೃತಪಟ್ಟು ಹಲವಾರು ಜನ ಆಸ್ಪತ್ರೆ ಸೇರಿದ್ದರು. ಈ ಘಟನೆ ಬೆನ್ನಲ್ಲೇ ಯಾದಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.