
ಗದಗ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಎಇ ಅವರನ್ನು ಅಮಾನತು ಮಾಡಲಾಗಿದೆ.
ರೋಣ ಲೋಕೋಪಯೋಗಿ ಇಲಾಖೆಯ ಎಇ ಎಲಿಗಾರ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಗದಗ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಚುನಾವಣೆ ಕರ್ತವ್ಯ ನಿರ್ಲಕ್ಷ, ತಪ್ಪು ಮಾಹಿತಿ ನೀಡಿದ್ದಕ್ಕೆ ಅಮಾನತು ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.