ಚುನಾವಣೆ ಕಾರ್ಯದಲ್ಲಿ ಬೇಜವಾಬ್ದಾರಿ ವರ್ತನೆ: ಇಬ್ಬರು ಸಸ್ಪೆಂಡ್

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಲೋಕಸಭೆ ಚುನಾವಣಾ ಕಾರ್ಯ ನಿರ್ವಹಿಸಲು ನಿರಾಕರಿಸಿ ಬೇಜವಾಬ್ದಾರಿ ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಶಿಕ್ಷಕಿಯರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಇಬ್ಬರು ಬಿಎಲ್ಓಗಳನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಗುರುವಾರ ಆದೇಶ ಹೊರಡಿಸಿದ್ದಾರೆ.

ಗುಡೆಕೋಟೆ ಹೋಬಳಿಯ ಮತಗಟ್ಟೆ ಸಂಖ್ಯೆ 120ರ ಅಧಿಕಾರಿ ಮಮತಾ ಮತ್ತು ಮತಗಟ್ಟೆ 119ರ ಅಧಿಕಾರಿ ಸುನಂದಾ ಅಮಾನತುಗೊಂಡ ಸಹಶಿಕ್ಷಕರಾಗಿದ್ದಾರೆ. ಇಲಾಖಾ ವಿಚಾರಣೆ ಕಾಯ್ದಿರಿಸಿ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read