ಬೆಂಗಳೂರು : ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ.
ಹೌದು. ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಡಿಆರ್ಎಫ್ಒ ದರ್ಶನ್ ಹುಲಿ ಉಗುರು ಧರಿಸಿದ್ದ ಬಗ್ಗೆ ದೂರು ದಾಖಲಾಗಿತ್ತು. ಅಲ್ಲದೆ, ಚಿಕ್ಕಬಳ್ಳಾಪುರ ಆರ್ಎಫ್ಒ ಮುನಿರಾಜ್ ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಇಬ್ಬರ ಕುರಿತು ಅರಣ್ಯ ಇಲಾಖೆಗೆ ದೂರು ದಾಖಲಾಗಿತ್ತು. ಸಚಿವ ಈಶ್ವರ್ ಖಂಡ್ರೆ ಅವರು ಪಿಸಿಸಿಎಫ್ ಪುಷ್ಕರ್ ಕುಮಾರ್ಗೆ ಕರೆ ಮಾಡಿ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ.
ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ. ಈ ಬಗ್ಗೆ ಕಾನೂನಿನ ಜ್ಞಾನದ ಅರಿವು ಇರುವುದಿಲ್ಲ ಹೀಗಾಗಿ ಇಂತಹ ಘಟನೆಗಳು ನಡೆಯುತ್ತಿವೆ ಎಂದರು.