
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಿ ಆರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.