alex Certify ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ

ಹಾವೇರಿ: ಹಾವೇರಿಯಲ್ಲಿ ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇಬ್ಬರು ಅಧಿಕಾರಿಗಳನ್ನು ಹಾವೇರಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಿರಿಯ ಆರೋಗ್ಯ ನಿರೀಕ್ಷಕ ರಮೇಶ ಆರ್. ಮುಂಜೋಜಿ, ನಗರಸಭೆ ಪೌರಾಯುಕ್ತ ಪರಶುರಾಮ ಛಲವಾದಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮೌಖಿಕ ಆದೇಶ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ. ಚರಂಡಿ ಕಾಲುವೆಗಳ ಮೇಲಿನ ಕಲ್ಲು ಮುಚ್ಚದೆ ಇವರು ನಿರ್ಲಕ್ಷ್ಯ ವಹಿಸಿದ್ದರು. ತೆರೆದ ಚರಂಡಿಗೆ ಬಿದ್ದು ಬಾಲಕ ಮೃತಪಟ್ಟಿದ್ದ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...