
ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ.
ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯ ಮೊಬೈಲ್ ನಂಬರ್ ಪಡೆದುಕೊಂಡ ಸಂತೋಷ್ ಅಸಭ್ಯ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ, ಈ ಬಗ್ಗೆ ಯಾರಿಗಾದರೂ ದೂರು ನೀಡಿದಲ್ಲಿ ಜೀವನವಿಡಿ ಕೊರಗುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಇದರಿಂದ ನೊಂದ ಮಹಿಳೆ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿ ಸಂತೋಷ್ ನನ್ನು ಅಮಾನತು ಮಾಡಲಾಗಿದೆ.