alex Certify ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ.

ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಯ ಮೊಬೈಲ್ ನಂಬರ್ ಪಡೆದುಕೊಂಡ ಸಂತೋಷ್ ಅಸಭ್ಯ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡಿದ್ದಲ್ಲದೇ, ಈ ಬಗ್ಗೆ ಯಾರಿಗಾದರೂ ದೂರು ನೀಡಿದಲ್ಲಿ ಜೀವನವಿಡಿ ಕೊರಗುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.

ಇದರಿಂದ ನೊಂದ ಮಹಿಳೆ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದು, ಪರಿಶೀಲನೆ ನಡೆಸಿ ಸಂತೋಷ್ ನನ್ನು ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...