ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ.
ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರತ್ ಗಡೇದ, ತಾಳಿಕೋಟೆ ತಾಲೂಕಿನ ಹಾಲಗೋಡ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಆರ್.ಐ. ಮುಲ್ಲಾ ಅವರು ಲೋಕಸಭೆ ಚುನಾವಣೆ ಕರ್ತವ್ಯದ ಆದೇಶ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.