alex Certify ಹಿಜಾಬ್ ಧರಿಸಿ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಇಬ್ಬರು ಮುಖ್ಯ ಅಧೀಕ್ಷಕರು ಸೇರಿ 7 ಮಂದಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಧರಿಸಿ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಇಬ್ಬರು ಮುಖ್ಯ ಅಧೀಕ್ಷಕರು ಸೇರಿ 7 ಮಂದಿ ಸಸ್ಪೆಂಡ್

ಗದಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಗದಗದ ಸಿ.ಎಸ್. ಪಾಟೀಲ್ ಬಾಲಕರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರ ಮತ್ತು ಬಾಲಕಿಯರ ಹೈಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಪರೀಕ್ಷೆಗೆ ಹಾಜರಾಗಿ ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬಾಲಕರ ಪ್ರೌಢಶಾಲೆಯ ಮುಖ್ಯ ಅಧೀಕ್ಷಕ ಕೆ.ಬಿ. ಭಜಂತ್ರಿ, ಬಾಲಕಿಯರ ಪ್ರೌಢಶಾಲೆಯ ಮುಖ್ಯ ಅಧೀಕ್ಷಕ ಹೊನಗುಂಡಿ ಅವರನ್ನು ಅಮಾನತು ಮಾಡಿ ಗದಗ ಡಿಡಿಪಿಐ ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...