ಬೆಂಗಳೂರು: ಕುಖ್ಯಾತ ವಂಚಕ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಕಾಟನ್ ಪೇಟೆ ಇನ್ಸ್ ಪೆಕ್ಟರ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಡಿಜಿ ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಸ್ಯಾಂಟ್ರೋ ರವಿ ಪರವಾಗಿ ಇಬ್ಬರು ಮಹಿಳೆಯರ ವಿರುದ್ಧ ಸುಳ್ಳು ದೂರು ದಾಖಲಿಸಿ ಜೈಲು ಸೇರಲು ಸಹಕರಿಸಿದ ಆರೋಪ ಕೇಳಿ ಬಂದಿತ್ತು. ಪ್ರಕರಣದ ಸಂಬಂಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದರು.
ದರೋಡೆ ಪ್ರಕರಣದಲ್ಲಿ ಪಾತ್ರವಿಲ್ಲದಿದ್ದರೂ ವಂಚಕ ಸ್ಯಾಂಟ್ರೋ ರವಿಯ ಪತ್ನಿ ಮತ್ತು ಆಕೆಯ ಸೋದರ ಸಂಬಂಧಿ ಮಹಿಳೆಯನ್ನು ಅಕ್ರಮವಾಗಿ ಬಂಧಿಸಿ ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಕಾಟನ್ ಪೇಟೆ ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ವಿರುದ್ಧ ಕ್ರಮ ಜರುಗಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟೆ ಠಾಣೆ ಇನ್ಸ್ಪೆಕ್ಟರ್ ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ.