alex Certify ಮಹಿಳಾ ಪೋಷಕರಿಗೆ ಸೆಂಡ್ ಆಯ್ತು ಆಶ್ಲೀಲ ಮೆಸೇಜ್: ಶಿಕ್ಷಕ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಪೋಷಕರಿಗೆ ಸೆಂಡ್ ಆಯ್ತು ಆಶ್ಲೀಲ ಮೆಸೇಜ್: ಶಿಕ್ಷಕ ಸಸ್ಪೆಂಡ್

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲಾ ಮಕ್ಕಳ ಮಹಿಳಾ ಪೋಷಕರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ.

ವಿವಿಧ ಕೆಲಸಗಳಿಗಾಗಿ ಶಾಲೆಗೆ ಬರುವ ವಿದ್ಯಾರ್ಥಿಗಳ ಪೋಷಕರೊಂದಿಗೆ ಸಲುಗೆಯಿಂದ ವರ್ತಿಸುತ್ತಿದ್ದ ಶಿಕ್ಷಕ ಅವರ ಮೊಬೈಲ್ ಸಂಖ್ಯೆ ಪಡೆದುಕೊಂಡು ನಂತರ ಅಶ್ಲೀಲ ವಿಡಿಯೋ, ಸಂದೇಶ ಕಳುಹಿಸುತ್ತಿದ್ದ. ಶಾಲೆಯ ವಿದ್ಯಾರ್ಥಿಗಳನ್ನು ಮಾತನಾಡಿಸುವ ನೆಪದಲ್ಲಿ ಅವರ ತಾಯಂದಿರ ಬಳಿ ಅಶ್ಲೀಲವಾಗಿ ಮಾತನಾಡುತ್ತಿದ್ದ ಆರೋಪ ಕೇಳಿ ಬಂದಿದೆ.

ಇದಲ್ಲದೇ, ಗ್ರಾಮದ ಯುವಕರೊಂದಿಗೆ ಸಂಜೆ ವೇಳೆ ಮದ್ಯಪಾನ ಮಾಡುತ್ತಿದ್ದ. ಶಾಲಾ ಅನುದಾನ ದುರ್ಬಳಕೆ, ಅನಧಿಕೃತ ಗೈರು, ತಡವಾಗಿ ಬರುವುದು, ಬೇಗನೆ ಹೋಗುವುದು, ಊರಿನ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶಿಕ್ಷಕನ ವಿರುದ್ಧ ಕಳೆದ ತಿಂಗಳು ದೂರು ನೀಡಿದ್ದರು. ತನಿಖೆ ನಡೆಸಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಡಿಡಿಪಿಐಗೆ ವರದಿ ನೀಡಿದ್ದು, ಇದನ್ನು ಆಧರಿಸಿ ಅಮಾನತು ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...