ಬೆಂಗಳೂರು : ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ
ಡಾ.ಸಿಎನ್ ಅಶ್ವತ್ಥನಾರಾಯಣ್, ಆರ್ ಅಶೋಕ್, ವೇದವ್ಯಾಸ ಕಾಮತ್, ಅರವಿಂದ್ ಬೆಲ್ಲದ್, ಅರಗ ಜ್ಞಾನೇಂದ್ರ , ವಿ.ಸುನೀಲ್ ಕುಮಾರ್, , ವೈ ಭರತ್ ಶೆಟ್ಟಿ , ಯಶಪಾಲ್ ಸುವರ್ಣ, ಮುನಿರಾಜ್, ಉಮರ್ ನಾಥ್ ಕೋಟ್ಯನ್ ಅವರನ್ನು ಸದನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ.
ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ವಿಧೇಯಕಗಳನ್ನು ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆಯೇ ಕಾಗದಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು, ನಿನ್ನೆ ನಡೆದ ವಿಪಕ್ಷ ನಾಯಕರ ಸಭೆಗೆ ಸರ್ಕಾರ ಶಿಷ್ಠಾಚಾರ ಉಲ್ಲಂಘನೆ ಮಾಡಿ ಐಎಎಸ್ ಅಧಿಕಾರಿಗಳನ್ನು ನೇಮಿಸಿದೆ ಎಂದು ಆರೋಪಿಸಿ ಸದನದ ಬಾವಿಗಿಳಿದು ಪ್ರತಿಭಟಿಸಲು ಮುಂದಾದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.ಈ ವೇಳೆ ಮಾಜಿ ಸಚಿವ ಆರ್.ಅಶೋಕ್, ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ಸದಸ್ಯರು ವಿಧೇಯಕಗಳನ್ನು ಹರಿದು ಹಾಕಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮೇಲೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.