ಬೆಂಗಳೂರು : ಬಿಜೆಪಿ ಸದಸ್ಯರ ಅಮಾನತು ವಿರೋಧಿಸಿ ಬಿಜೆಪಿ ಪ್ರತಿಭಟನೆಗಿಳಿದಿದ್ದು, ಪ್ರತಿಭಟನೆಗೆ ಸಾಥ್ ನೀಡುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಕೂಡ ಬಿಜೆಪಿ ಆಹ್ವಾನ ನೀಡಿದೆ.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಸಾಥ್ ನೀಡುವಂತೆ ಮಾಜಿ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕರೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ಜೆಡಿಎಸ್ ಶಾಸಕರ ಅಭಿಪ್ರಾಯ ಪಡೆದು ನಂತರ ಈ ಬಗ್ಗೆ ತಿಳಿಸುವೆ ಎಂದ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಶಾಸಕರ ಅಭಿಪ್ರಾಯ ಪಡೆದ ಬಳಿಕ ಹೆಚ್ಡಿಕೆ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿತ್ತು, ಸದನ ಮುಗಿಯುವವರೆಗೂ 10 ಮಂದಿ ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ.