ಶಿವಮೊಗ್ಗ: ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಇಂದು ಬೆಳಿಗ್ಗೆ ಕಾಲೇಜು ಕಟ್ಟಡದಿಂದ ಬಿದ್ದು ಮೇಘಶ್ರೀ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿ ಮೇಘಶ್ರೀ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವಳು. ಕಾಲೇಜಿನ ಫ್ಲೆಕ್ಸ್ ಹರಿದು ಮೃತ ವಿದ್ಯಾರ್ಥಿನಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿದ್ಯಾರ್ಥಿನಿ ಪೋಷಕರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಸ್ಥಳಕ್ಕೆ ಕಾಲೇಜು ಆಡಳಿತ ಮಂಡಳಿಯವರು ಬಂದಿಲ್ಲ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದಿಚುಂಚನಗಿರಿ ಕಾಲೇಜಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಭೇಟಿ ನೀಡಿದ್ದು, ಪ್ರತಿಭಟನಾಕಾರರ ಮನವೊಲಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ಸದಸ್ಯರು, ವಿದ್ಯಾರ್ಥಿನಿಯ ಪೋಷಕರು, ಕನ್ನಡ ಪರ ಸಂಘಟನೆಗಳ ಮುಖಂಡರೊಂದಿಗೆ ಎಸ್ಪಿ ಮಿಥುನ್ ಕುಮಾರ್ ಸಭೆ ನಡೆಸಿದ್ದಾರೆ.