
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದಾರೆ.
ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಭೇಟಿಯಾಗಿ, ಅವರ ಆಶಿರ್ವಾದ ಪಡೆದ ವಿಜಯೇಂದ್ರ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ಶಾಸಕರು, ಮುಖಂಡರು ಉಪಸ್ಥಿತರಿದ್ದರು.
ಸ್ವಾಮೀಜಿ ಭೇಟಿ ಬಳಿಕ ವಿಜಯೇಂದ್ರ ಹಾಗೂ ಬಿಜೆಪಿ ನಾಯಕರು ಮಠದಲ್ಲಿಯೇ ಉಪಹಾರ ಸೇವಿಸಿ ಕೆಲಕಾಲ ಸ್ಥಳೀಯ ಮುಖಂದರ ಜೊತೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.