
ಬೆಳಗಾವಿ: ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ ಮಾಡಿದ ಮತ್ತು ಶಿವಾಜಿ ಪ್ರತಿಮೆ ಮಸಿ ಬಳಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ ಎಂದರು.
ಕಾನೂನಿನಲ್ಲಿ ಅವಕಾಶವಿದ್ದರೆ ಎಂಇಎಸ್ ಸಂಘಟನೆಯನ್ನು ಬ್ಯಾನ್ ಮಾಡಲಾಗುವುದು. ಇದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.