ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿ. 4 ರಿಂದ 15 ರವರೆಗೆ ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಸುವ ಸಂಬಂಧ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಡಿ. 4ರಂದು ಬೆಳಗ್ಗೆ 11 ಗಂಟೆಗೆ ಸುವರ್ಣಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಾರ್ಯಕಲಾಪಗಳು ಆರಂಭವಾಗಲಿವೆ. ಡಿಸೆಂಬರ್ 4, 5, 6, 7, 8, 11, 12, 13, 14 ಮತ್ತು 15 ರಂದು ಒಟ್ಟು 10 ದಿನಗಳ ಕಾಲ ಕಲಾಪ ನಡೆಯಲಿದೆ.
ವಿವಿಧ ದಿನಗಳ ಕಾರ್ಯಕಲಾಪದ ಅವಧಿಗಳಲ್ಲಿ ಪ್ರಶ್ನೆಗಳನ್ನು ಕೇಳಲು ಇಚ್ಛಿಸುವ ಶಾಸಕರಿಂದ ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ನ. 17 ರಿಂದ 28ರ ವರೆಗೆ ಪ್ರತಿದಿನ ಮಧ್ಯಾಹ್ನ 3 ಗಂಟೆ ಒಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಶ್ನೆಗಳ ಸೂಚನಾ ಪತ್ರಗಳ ಬ್ಯಾಲೆಟ್ ನಡೆಸಲು ನ.20 ರಿಂದ 29 ರವರೆಗೆ ಸಮಯ ನಿಗದಿಪಡಿಸಿರುವುದಾಗಿ ವಿಧಾನಸಭೆ ಸಚಿವಾಲಯ ತಿಳಿಸಿದೆ.