ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳನ್ನು ನಿರ್ಮಿಸಲಾಗುವುದು.
ಇಂದು ಬೆಳಗ್ಗೆ 10.15 ಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಲಿದ್ದು, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಹಾಗೂ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟ ಸದಸ್ಯರು, ಶಾಸಕರು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಳೆದ ವರ್ಷ ಅಧಿವೇಶನದಲ್ಲಿ ಪ್ರತಿಮೆಗಳ ನಿರ್ಮಾಣದ ಬಗ್ಗೆ ಸರ್ಕಾರ ಘೋಷಣೆ ಮಾಡಿತ್ತು.