![](https://kannadadunia.com/wp-content/uploads/2022/10/water-death-1.jpg)
ಬೆಂಗಳೂರು: ಸುವರ್ಣಮುಖಿ ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತರ ಕಣ್ಮುಂದೆಯೇ ನೀರು ಪಾಲಾಗಿರುವ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ.
ಬೊಮ್ಮಸಂದ್ರದ ಎಸ್ ಎಫ್ ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಗೆ ಬಂದಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳು ಈಜಲು ಕಲ್ಯಾಣಿಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ.
ಗಾರ್ವೆಬಾವಿ ಪಾಳ್ಯದ ದೀಪು (20) ಹಾಗೂ ಯೋಗೀಶ್ವರ್(20) ಮೃತರು. ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪುತ್ತಿರುವ ದೃಶ್ಯ ದಡದಲ್ಲಿ ನಿಂತಿದ್ದ ವಿದ್ಯಾರ್ಥಿಯೋರ್ವನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ನೀರಿನಲ್ಲಿ ಈಜಲಾಗದೇ ಇಬ್ಬರೂ ಪರದಾಡಿದ್ದಾರೆ. ದಡದಲ್ಲಿದ್ದ ಮೂವರಿಗೆ ಅವರನ್ನು ರಕ್ಷಣೆ ಮಾಡಲು ಸಾಧ್ಯವಾಗದೇ ಕಂಗಾಲಾಗಿದ್ದಾರೆ. ಇಬ್ಬರು ಸ್ನೇಹಿತರ ಕಣ್ಮುಂದೆಯೇ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದಾರೆ.