alex Certify ಇನ್ಮುಂದೆ ವರ್ಷಪೂರ್ತಿ ಜಗಮಗಿಸಲಿದೆ ‘ಸುವರ್ಣಸೌಧ’ : ಶಾಶ್ವತ ‘ವಿದ್ಯುತ್ ದೀಪಾಲಂಕಾರಕ್ಕೆ’ ಸಿಎಂ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಮುಂದೆ ವರ್ಷಪೂರ್ತಿ ಜಗಮಗಿಸಲಿದೆ ‘ಸುವರ್ಣಸೌಧ’ : ಶಾಶ್ವತ ‘ವಿದ್ಯುತ್ ದೀಪಾಲಂಕಾರಕ್ಕೆ’ ಸಿಎಂ ಚಾಲನೆ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು.

ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ಇದುವರೆಗೂ ವಿಧಾನ ಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರ ಸುವರ್ಣ ವಿಧಾನಸೌಧವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಗಳಿಂದ ಸುವರ್ಣಸೌಧ ಜಗಮಗಿಸಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...