alex Certify BIG NEWS: ಸ್ವಚ್ಛತೀರ್ಥ ಅಭಿಯಾನ: ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಚ್ಛತೀರ್ಥ ಅಭಿಯಾನ: ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಾಲಯಗಳು ಹಾಗೂ ದೇವಾಲಯಗಳ ಸುತ್ತಮುತ್ತ ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಸ್ವಚ್ಛತೀರ್ಥ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ ಸ್ವಚ್ಛತೆ ಮಾಡಿ ಸೇವೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಶ್ರೀ ಸಿದ್ದಪ್ಪಾಜಿ ಮೂಲ ಗದ್ದುಗೆ ಮಠದ ಆವರಣದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವ ಮೂಲಕ ಪ್ರಹ್ಲಾದ್ ಜೋಶಿ ತಮ್ಮ ಸೇವೆ ಸಲ್ಲಿಸಿದರು.

ಈ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಸಂತೋಷ್ ಚೌವ್ಹಾಣ್, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಕೂಡ ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು.

ರಾಮ ಮಂದಿರ ಉದ್ಘಾಟನೆಯವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿದಿನ ರಾಜ್ಯದ ವಿವಿಧ ದೇವಾಲಯಗಳಲ್ಲಿ ಭಜನೆ, ಕೀರ್ತನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...