ಬೆಂಗಳೂರು :ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಉಚಿತವಾಗಿ ನೀಡುವ ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಗಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಕಾಲೇಜುಗಳಲ್ಲಿ ಸುಮಾರು 19 ಲಕ್ಷ ಹೆಣ್ಣುಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳ ವಿತರಣೆ ಆರಂಭಿಸಲಾಗಿದೆ. ಆರೋಗ್ಯ ಇಲಾಖೆ ನೇರವಾಗಿ ಶಾಲೆಗಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನ ತಲುಪಿಸಲಿದ್ದು, ಶಾಲೆಯ ಮುಖ್ಯಸ್ಥರು ಹೆಣ್ಣುಮಕ್ಕಳಿಗೆ ಕಿಟ್‌ಗಳನ್ನ ವಿತರಣೆ ಮಾಡಲಿದ್ದಾರೆ. ಒಂದು ಪ್ಯಾಕ್ ನಲ್ಲಿ 10 ಸ್ಯಾನಿಟರಿ ನ್ಯಾಪ್‌ಕಿನ್ ಗಳಿದ್ದು, ಒಂದು ವರ್ಷಕ್ಕೆ ಸಾಕಾಗುವಷ್ಟು ಸ್ಯಾನಿಟರಿ ನ್ಯಾಪ್‌ಕಿನ್‌ಗಳಿರುವ ಕಿಟ್‌ಗಳನ್ನ ಒಟ್ಟಿಗೆ ವಿದ್ಯಾರ್ಥಿನಿಯರಿಗೆ ವಿತರಿಸಲಾಗುತ್ತದೆ.