ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಮೀಪ ಸ್ವಾಮೀಜಿಯವರ ಶಿಷ್ಯ ತಿಪ್ಪೇರುದ್ರಸ್ವಾಮಿ ಹೈಡ್ರಾಮಾ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರುಘಾ ಸ್ವಾಮೀಜಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ತಿಪ್ಪೇರುದ್ರಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.