alex Certify ನದಿಯಲ್ಲಿ ಸಂಕ್ರಾಂತಿ ಸ್ನಾನದ ವೇಳೆಯಲ್ಲೇ ಸ್ವಾಮೀಜಿಗೆ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನದಿಯಲ್ಲಿ ಸಂಕ್ರಾಂತಿ ಸ್ನಾನದ ವೇಳೆಯಲ್ಲೇ ಸ್ವಾಮೀಜಿಗೆ ಹೃದಯಾಘಾತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಹಾಗಾಂವ ಕಳ್ಳಿಮಠದ ಶ್ರೀ ಗುರುಲಿಂಗ ಶಿವಾಚಾರ್ಯರು ನದಿಯಲ್ಲಿ ಸಂಕ್ರಾಂತಿ ಸ್ನಾನ ಮಾಡುವ ವೇಳೆಯಲ್ಲಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಮಕರ ಸಂಕ್ರಾಂತಿ ಪ್ರಯುಕ್ತ ಶಹಾಬಾದ ತಾಲೂಕಿನ ಹೊನಗುಂಟಾ ಗ್ರಾಮದ ಭೀಮಾ -ಕಾಗಿಣ ನದಿಯ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಶ್ರೀಗಳಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ನದಿಯಿಂದ ಹೊರಗೆ ಕರೆ ತರುವಷ್ಟರಲ್ಲಿ ಶ್ರೀಗಳು ಇಹಲೋಕ ತ್ಯಜಿಸಿದ್ದಾರೆ. 58 ವರ್ಷದ ಶ್ರೀಗಳ ಹಠಾತ್ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...