ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಮತ್ತೊಂದು ಶಾಕ್ ಎದುರಾಗಿದೆ.
ಮತ್ತೆ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತಡರಾತ್ರಿ ಮುರುಘಾ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮಠದಲ್ಲಿನ ನೌಕರರ ಮಕ್ಕಳಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಂತರ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.