ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲ್ಲೂಕಿನ ಪಾಲಡ್ಕ ಸಮೀಪ ಶಾಂಭವಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ.
ಯುವತಿ ಸೇರಿದಂತೆ ನಾಲ್ವರು ನದಿಯಲ್ಲಿ ಜಲಸಮಾಧಿಯಾಗಿದ್ದಾರೆ. ಮೂಡುಶೆಡ್ಡೆ ಗ್ರಾಮದ ನಿಖಿಲ್(18), ಹರ್ಷಿತಾ(20), ವೇಣೂರಿನ ಸುಭಾಷ್(19), ಬಜ್ಪೆಯ ರವಿ(30) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯಕೈಗೊಂಡಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.