ಮೈಸೂರು ಡಿಸಿ ನಿವಾಸದ ಈಜುಕೊಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಟ್ವೀಟ್ ಮಾಡಿದ್ದಾರೆ.
ದೇಶವು ಆರೋಗ್ಯ ಮತ್ತು ಹಣಕಾಸಿನ ಬಿಕ್ಕಟ್ಟಿನಲ್ಲಿದ್ದ ಸಂದರ್ಭದಲ್ಲಿ ಈಜುಕೊಳ ನಿರ್ಮಿಸುವುದನ್ನು ನಿಲ್ಲಿಸಬಹುದಿತ್ತು ಎಂದು ಹೇಳಿದ್ದಾರೆ.
ಕೊರೋನಾ ಮತ್ತು ಆರ್ಥಿಕ ವ್ಯವಸ್ಥೆಯಿಂದ ಜನ ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವನ್ನು ಬಳಸಿ ಬಂಗಲೆಯಲ್ಲಿ ಈಜುಕೊಳ ನಿರ್ಮಾಣಕ್ಕೆ ಮುಂದಾಗಿದ್ದು ಮೊಟ್ಟಮೊದಲನೆಯದಾಗಿ ನೈತಿಕ ಅಧಃಪತನ ತೋರಿಸುತ್ತದೆ. ಈಜುಕೊಳ ಕಟ್ಟಲು ಪರವಾನಿಗೆ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಈಜುಕೊಳ ನಿರ್ಮಾಣವನ್ನು ಮುಂದೂಡಬಹುದಾಗಿತ್ತು ಎಂದು ಹೇಳಿದ್ದಾರೆ.
ರೋಹಿಣಿ ಸಿಂಧೂರಿ ಅವರು ಪಾರಂಪರಿಕ ರಕ್ಷಣಾ ಸಮಿತಿ ಅನುಮತಿ ಇಲ್ಲದೇ ಮೈಸೂರು ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.