ಉಡುಪಿ: ಈಜಲು ಸಮುದ್ರಕ್ಕೆ ಇಳಿದಿದ್ದ ಇಬ್ಬರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆ ಕುಂದಾಪುರದ ಕೋಡಿ ಬೀಚ್ ನಲ್ಲಿ ನಡೆದಿದೆ.
ಧನರಾಜ್(23), ದರ್ಶನ್(18) ನೀರು ಪಾಲಾದ ಸಹೋದರರು ಎಂದು ಹೇಳಲಾಗಿದೆ. ಮತ್ತೊಬ್ಬ ಸೋದರ ಧನುಷ್ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದವರ ಜೊತೆಗೆ ಸಮುದ್ರ ನೋಡಲು ಬಂದಿದ್ದಾಗ ಘಟನೆ ನಡೆದಿದೆ. ನಾಪತ್ತೆಯಾಗಿರುವ ದರ್ಶನ್ ಗಾಗಿ ಹುಡುಕಾಟ ಮುಂದುವರೆದಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.