ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಶಂಭೂರು ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ಯುವಕ ಮೃತಪಟ್ಟಿದ್ದಾರೆ.
ಮೂವರು ಯುವಕರು ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಘಟನೆ ನಡೆದಿದೆ. ಓರ್ವ ಯುವಕ ಸಾವನ್ನಪ್ಪಿದ್ದು, ಸ್ಥಳೀಯ ನಿವಾಸಿ ಮೊಹಮ್ಮದ್ ಇಬ್ಬರು ಯುವಕರನ್ನು ರಕ್ಷಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.