
ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ.
ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಲೂರು ಗ್ರಾಮದ ಬಳಿಯಿರುವ ಚಿಲುಮೆ ಮಠದ ಸ್ವಾಮೀಜಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.