ನವದೆಹಲಿ : ಕಾಂಗ್ರೆಸ್ ನ್ನು ದುರ್ಬಲಗೊಳಿಸಲು ಪ್ರಧಾನಿ ಮೋದಿ ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಗರಂ ಆಗಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಅನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥಿತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪುತ್ರ ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು ಕಾಂಗ್ರೆಸ್ ನ ಹಣಕಾಸಿನ ಬಿಕ್ಕಟ್ಟಿಗೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 1994-95ರ ಹಣಕಾಸು ವರ್ಷದ ಮೌಲ್ಯಮಾಪನವನ್ನು ಮತ್ತೆ ತೆರೆಯುವಂತೆ ಆದಾಯ ತೆರಿಗೆ ಕಳೆದ ವಾರ ಕಾಂಗ್ರೆಸ್ ಗೆ ನೋಟಿಸ್ ಕಳುಹಿಸಿದೆ.
ಫೆಬ್ರವರಿ 16 ರಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್ ಅವರು ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು. ಕೆಲವು ಗಂಟೆಗಳ ನಂತರ, ತೆರಿಗೆ ನ್ಯಾಯಮಂಡಳಿ ಪಕ್ಷವು ತನ್ನ ಬ್ಯಾಂಕ್ ಖಾತೆಗಳನ್ನು ಪ್ರವೇಶಿಸಲು ಯಾವುದೇ ನಿರ್ಬಂಧಗಳಿಲ್ಲ ಎಂದು ಹೇಳಿದೆ.