ಟಿ-20 ವಿಶ್ವಕಪ್ ನಲ್ಲಿ ಭಾರತ ಕೆಟ್ಟ ಪ್ರದರ್ಶನ ನೀಡಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋಲುಂಡಿದೆ. ಈ ಮೂಲಕ ಸೆಮಿಫೈನಲ್ ರೇಸ್ ನಿಂದ ಹೊರಗುಳಿಯುವ ಅಪಾಯದಲ್ಲಿ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿ ಆಟಗಾರರನ್ನಿಟ್ಟುಕೊಂಡರೂ ಟೀಂ ಇಂಡಿಯಾ ಸೋಲುಂಡಿದೆ. ಮುಂದಿನ ಪಂದ್ಯಗಳಲ್ಲಿ ತಂಡ ಬದಲಾಗುವ ಸಾಧ್ಯತೆಯಿದೆ.
ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಶ್ವಿನ್ ಬದಲಿಗೆ ವರುಣ್ ಚಕ್ರವರ್ತಿ ಮೈದಾನಕ್ಕಿಳಿದಿದ್ದರು. ಆದರೆ ನಾಯಕ ವಿರಾಟ್ ಕೊಹ್ಲಿ ನಿರ್ಧಾರವು ತಪ್ಪಾಗಿದೆ ಎಂಬುದು ಸಾಬೀತಾಗಿದೆ. ವರುಣ್ ಚಕ್ರವರ್ತಿ ಎರಡೂ ಪಂದ್ಯಗಳಲ್ಲಿ ಒಂದೂ ವಿಕೆಟ್ ಪಡೆಯಲಿಲ್ಲ. ಹಾಗಾಗಿ ಮುಂದಿನ ಪಂದ್ಯದಲ್ಲಿ ವರುಣ್ ಕೈಬಿಟ್ಟು ಆರ್ ಅಶ್ವಿನ್ ಗೆ ಅವಕಾಶ ನೀಡುವ ಸಾಧ್ಯತೆಯಿದೆ.
ಮೊಹಮ್ಮದ್ ಶಮಿ ಬದಲು ರಾಹುಲ್ ಚಹಾರ್ ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಮೊಹಮ್ಮದ್ ಶಮಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಎರಡೂ ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆದಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ ಕೈಬಿಡುವ ಸಾಧ್ಯತೆಯಿದೆ. ಮೊಹಮ್ಮದ್ ಶಮಿ ಬದಲಿಗೆ ಲೆಗ್ ಸ್ಪಿನ್ನರ್ ರಾಹುಲ್ ಚಹಾರ್ ಗೆ ಅವಕಾಶ ನೀಡುವ ಸಾಧ್ಯತೆಯಿದೆ.