alex Certify ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರಿಂದ ಆಯಾಸಗೊಂಡಿದ್ದರು. ಸುಸ್ತಾದ ಕಾರಣ ವೈದ್ಯರ ತಪಾಸಣೆಗೆ ಒಳಗಾಗಿದ್ದ ವೇಳೆ ಹೃದಯದಲ್ಲಿ ಸಮಸ್ಯೆ ಇರುವುದು ಕಂಡುಬಂದಿದೆ.

ಕೂಡಲೇ ಜಯದೇವ ಆಸ್ಪತ್ರೆಗೆ ತೆರಳಿ ಪೂರ್ಣ ತಪಾಸಣೆಗೆ ಒಳಗಾಗಿದ್ದಾರೆ. ವೈದ್ಯರು ಪರೀಕ್ಷಿಸಿದಾಗ ಬ್ಲಾಕೇಜ್ ಇರುವುದನ್ನು ಮನಗಂಡು ಶಸ್ತ್ರಚಿಕಿತ್ಸೆ ನಡೆಸಿ ಸ್ಟೆಂಟ್ ಅಳವಡಿಸಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ವೈದ್ಯರು ನಿಗಾವಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...