alex Certify ಗುಡ್ ನ್ಯೂಸ್: ಉಚಿತವಾಗಿ ಟ್ಯಾಬ್ ವಿತರಣೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಉಚಿತವಾಗಿ ಟ್ಯಾಬ್ ವಿತರಣೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ ವಿತರಣಾ ಅವಧಿಯನ್ನು ಡಿ.31 ಎಂದು ನಿಗದಿಪಡಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಜ. 31 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಬೇಕಾದ ಅರ್ಹ ಫಲಾಪೇಕ್ಷಿಗಳು ನಿಗಮದ ವ್‍ಬ್ ಸೈಟ್ www.ksskdc.kar.nic.in  ಮೂಲಕ ಅವಶ್ಯ ದಾಖಲಾತಿಗಳೊಂದಿಗೆ ಜ.3 ರಿಂದ ಜ.31 ರೊಳಗೆ ಅಪ್ ಲೋಡ್ ಮಾಡಬಹುದು. ಅರ್ಜಿ ಸಲ್ಲಿಸಿದ ಫಲಾಪೇಕ್ಷಿಗಳ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಗುರಿಗನುಣವಾಗಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ನಂ.337/16ಎ-16 ಗಣೇಶ್ ಲೇಔಟ್ 1ನೇ ಕ್ರಾಸ್, ಪಿ.ಬಿ.ರಸ್ತೆ, ದಾವಣಗೆರೆ. ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...