![](https://kannadadunia.com/wp-content/uploads/2023/10/4a78bb76-cf42-43b9-b29b-9322bc468f31.jpg)
ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ ನಾಳೆ ರಾಜ್ಯಾದ್ಯಂತ ಬಿಡುಗಡೆ ಸಜ್ಜಾಗಿದೆ. ಈ ಚಿತ್ರದಲ್ಲಿ ನಾಗಭೂಷಣ ಮತ್ತು ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ರವಿ ಹುಣಸೂರ್, ತಾರಾ, ರಂಗಾಯಣ ರಘು, ಶರತ್ ಲೋಹಿತಾಶ್ವ, ವಾಸುಕಿ ವೈಭವ್, ವೈಜನಾಥ್ ಬಸಪ್ಪ ಬಿರಾದರ್, ಸೇರಿದಂತೆ ಹಲವರ ತಾರಾ ಬಳಗವಿದೆ.
ಡಾಲಿ ಧನಂಜಯ್ ತಮ್ಮ ಡಾಲಿ ಪಿಚ್ಚರ್ಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ನೀಡಿದ್ದಾರೆ. ಎಸ್ ಕೆ ರಾವ್ ಅವರ ಛಾಯಾಗ್ರಹಣ ಮತ್ತು ಮಧು ತುಂಬಾ ಕೆರೆಯವರ ಸಂಕಲನವಿದೆ.
ಚಾಲೆಂಜಿಂಗ್ ಸ್ಟಾರ್ ಇತ್ತೀಚಿಗಷ್ಟೇ ಈ ಸಿನಿಮಾ ಟ್ರೈಲರ್ ಲಾಂಚ್ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದರು. ಈ ಚಿತ್ರದ ಹಾಡುಗಳು ಈಗಾಗಲೇ ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿವೆ.
![](https://kannadadunia.com/wp-content/uploads/2023/10/f1752646-51c1-4c08-82a4-a2a4e810233f-400x316.jpg)