
ಬೆಳಗಾವಿ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ.
ತಹಶೀಲ್ದಾರ್ ಬಸವರಾಜ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಹಾಗೂ ಎಫ್ ಡಿಎ ಅಶೋಕ್ ಕಗ್ಗಲಿಗೇರ್ ವಿರುದ್ಧ ಬೆಳಗಾವಿ ಖಡೇಬಜಾರ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಮೂವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಮತ್ತೊಂದೆಡೆ ನಾಪತ್ತೆಯಾಗಿರುವ ಮೂವರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.
ಇದೇ ವೇಳೆ ಬೆಳಗಾವಿ ಕಮಿಷ್ನರ್ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಿದ್ದಾರೆ. ಸಿಪಿಐ ಬದಲಿಗೆ ಎಸಿಪಿಗೆ ಪ್ರಕರಣದ ತನಿಖೆ ಜವಾಬ್ದಾರಿ ನೀಡಿದ್ದಾರೆ.