alex Certify ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದಂದು ನಟ ಶಾರುಖ್ ನೀಡಿದ್ದಾರೆ ಈ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದಂದು ನಟ ಶಾರುಖ್ ನೀಡಿದ್ದಾರೆ ಈ ಸಲಹೆ

ಪ್ರಧಾನಿ ನರೇಂದ್ರ ಮೋದಿಯವರು ಇಂದು 72ನೇ ವಸಂತಕ್ಕೆ ಕಾಲಿಟ್ಟಿದ್ದು, ದೇಶದಾದ್ಯಂತ ಸಡಗರ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ. ಮೋದಿ ಅವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ, ಹೆಲ್ತ್ ಕ್ಯಾಂಪ್ ಸೇರಿದಂತೆ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನರೇಂದ್ರ ಮೋದಿ ಅವರಿಗೆ ದೇಶ – ವಿದೇಶಗಳ ಗಣ್ಯರು ಮಾತ್ರವಲ್ಲದೆ ಜನ ಸಾಮಾನ್ಯರು ಕೂಡ ಹುಟ್ಟು ಹಬ್ಬದ ಶುಭಾಶಯಗಳು ಕೋರಿ ಸಂದೇಶ ರವಾನಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಇದರ ಮಧ್ಯೆ ಖ್ಯಾತ ಬಾಲಿವುಡ್ ನಟ ಶಾರುಖ್ ಖಾನ್, ನರೇಂದ್ರ ಮೋದಿಯವರಿಗೆ ಹುಟ್ಟು ಹಬ್ಬದ ಸಂದೇಶ ಕಳುಹಿಸಿದ್ದು, ಬಿಡುವಿಲ್ಲದಂತೆ ಜನಸೇವೆಯಲ್ಲಿ ತೊಡಗಿರುವ ನೀವು ಜನ್ಮದಿನದ ಈ ದಿನವಾದರೂ ಬಿಡುವು ತೆಗೆದುಕೊಂಡು ಸಂಭ್ರಮಿಸಿ ಎಂದು ಹಾರೈಸಿದ್ದಾರೆ.

— Shah Rukh Khan (@iamsrk) September 17, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...