ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಂಕಷ್ಟಕ್ಕೆ ಸಿಲುಕಿದ್ದು, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ಚೌಧರಿ ಅವರು ಪಕ್ಷ ವಿರೋಧಿ ಚಟುವಟಿಕೆಗಾಗಿ ಶಿಸ್ತು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.
ಸಿಧು ಈ ಹಿಂದೆ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿ ಹೊಸ ರಾಜಕೀಯ ಸಂಘಟನೆಯನ್ನು ರಚಿಸುವ ಘೋಷಣೆಯನ್ನು ಶ್ಲಾಘಿಸಿದ್ದರು.
ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರ ಶಿಫಾರಸಿನ ಮೇರೆಗೆ ಚೌಧರಿ ಏಪ್ರಿಲ್ 23 ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ, ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಪಿಸಿಸಿ ಅಧ್ಯಕ್ಷರು ಟಿಪ್ಪಣಿ ರವಾನಿಸಿದ್ದಾರೆ. ಇದನ್ನು ಆಧರಿಸಿ ಹರೀಶ್ ಚೌಧರಿ ಶಿಫಾರಸು ಮಾಡಿದ್ದಾರೆ.