ಬೆಂಗಳೂರು : ಜಿಲ್ಲಾಧಿಕಾರಿಗಳು, ಡಿಎಚ್ಒಗಳು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ಷಿಪ್ರವಾಗಿ ಡೆಂಘಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಕಲುಷಿತ ನೀರು ಸೇವಿಸಿ ಹಲವೆಡೆ ಸಾವು – ನೋವು ಸಂಭವಿಸಿದ್ದು, ಇಂತಹ ಪ್ರಕರಣಗಳು ಮರುಕಳಿಸಿದರೆ, ಹಿರಿಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.