alex Certify ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಈ ಮುಂಜಾಗ್ರತಾ ಕ್ರಮ ಕೈಗೊಳ್ಳಿ

ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‍ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು  ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.

 ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡುಬರಬಹುದು.

ಝಿಕಾ ವೈರಸ್ ಪತ್ತೆ ಹಚ್ಚುವ ವಿಧಾನ :

 ರೋಗ ಲಕ್ಷಣಗಳು ಕಂಡು ಬಂದವರ ರಕ್ತದ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.

ಝಿಕಾ ವೈರಸ್ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳುವ ಕ್ರಮ :

  • ಝಿಕಾವೈರಸ್ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿರುವುದಿಲ್ಲ.
  • ರೋಗಲಕ್ಷಣಗಳಿಗೆಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯುವುದು.
  • ನಿರ್ಜಲೀಕರಣತಪ್ಪಿಸಲುಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸುವುದು.
  • ರೋಗಲಕ್ಷಣಗಳಿಗೆಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಗಳನ್ನು ಸೇವಿಸಬೇಕು ಹಾಗೂ ರೋಗ ಲಕ್ಷಣಗಳು ಹೆಚ್ಚಾದರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು.
  • ಝಿಕಾವೈರಸ್ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆಯನ್ನು ಬಳಸುವುದು.

ಝಿಕಾ ವೈರಸ್ ಸೋಂಕು ಬರದಂತೆ ತಡೆಯಲು ಮುಂಜಾಗ್ರತಾ ಕ್ರಮ :

  1. ಸ್ವಚ್ಛನಿಂತನೀರು ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು.
  2. ಈಸೊಳ್ಳೆಗಳುಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡುವುದು.
  3. ನೀರುಸಂಗ್ರಹಣಾಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು.
  4. ನಮ್ಮಸುತ್ತ-ಮುತ್ತಲಿನಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ನೀರು ನಿಲ್ಲದಂತೆ ಎಚ್ಚರವಹಿಸುವುದು.
  5. ಸ್ವಯಂರಕ್ಷಣಾವಿಧಾನಗಳನ್ನು ಅನುಸರಿಸುವುದು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...