alex Certify ಮಹಿಳಾ ವ್ಯವಹಾರಗಳ ಸಚಿವಾಲಯಕ್ಕೆ ಮಹಿಳೆಯರಿಗೇ ಇಲ್ಲ ಪ್ರವೇಶ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ವ್ಯವಹಾರಗಳ ಸಚಿವಾಲಯಕ್ಕೆ ಮಹಿಳೆಯರಿಗೇ ಇಲ್ಲ ಪ್ರವೇಶ…!

ಕಾಬೂಲ್​​ನ ಮಹಿಳಾ ವ್ಯವಹಾರಗಳ ಸಚಿವಾಲಯಕ್ಕೆ ಪ್ರವೇಶಿಸಲು ಮಹಿಳಾ ಉದ್ಯೋಗಿಗಳಿಗೆ ತಾಲಿಬಾನ್​ ನಿರ್ಬಂದ ಹೇರಿದೆ. ಪುರುಷರಿಗೆ ಮಾತ್ರ ಈ ಕಟ್ಟಡದ ಒಳಗೆ ಪ್ರವೇಶ ಇದೆ ಎಂದು ಸಚಿವಾಲಯದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಸಚಿವಾಲಯದ ನಾಲ್ವರು ಮಹಿಳಾ ಉದ್ಯೋಗಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಸಚಿವಾಲಯ ಹೇಳಿದೆ. ತಾಲಿಬಾನ್​ನ ಈ ನಿರ್ಧಾರವನ್ನು ಖಂಡಿಸಿರುವ ಮಹಿಳೆಯರು ಸಚಿವಾಲಯದ ಸಮೀಪ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಅಫ್ಘಾನಿಸ್ತಾನದ ಮೇಲೆ ತನ್ನ ಹಿಡಿತವನ್ನು ಸಾಧಿಸಿದಾಗಿನಿಂದ ತಾಲಿಬಾನ್​ ಮಹಿಳೆಯರ ಮೇಲೆ ಒಂದಿಲ್ಲೊಂದು ನಿರ್ಬಂಧಗಳನ್ನು ಹೇರುತ್ತಲೇ ಬರ್ತಿದೆ. ಇದೇ ರೀತಿ ಮುಂದುವರಿದರೆ ಅಫ್ಘಾನಿಸ್ತಾನದ ಮಹಿಳೆಯರು ಜೀವನ ನಡೆಸಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ಬರಲು ಇನ್ನು ಹೆಚ್ಚು ದಿನ ಬಾಕಿ ಉಳಿದಿಲ್ಲ ಎನಿಸುತ್ತಿದೆ.

ತಾಲಿಬಾನ್​ ವಕ್ತಾರ ಜಬಿಹುಲ್ಲಾ ಮುಜಾಹಿದ್​ ಇಸ್ಲಾಂ ತತ್ವಗಳ ಆಧಾರದ ಮೇಲೆ ಮಹಿಳೆಯರಿಗೆ ಎಲ್ಲಾ ಹಕ್ಕುಗಳನ್ನು ನೀಡುವುದಾಗಿ ಈ ಹಿಂದೆ ಹೇಳಿದ್ದರು. ಆದರೆ ಈ ಹೇಳಿಕೆಯ ವಿರುದ್ಧ ತಾಲಿಬಾನ್​ ನಡೆದುಕೊಂಡಿದ್ದು ಮಹಿಳೆಯರಿಗೆ ಎಲ್ಲಾ ವಿಭಾಗಗಳಿಂದಲೂ ನಿರ್ಬಂಧ ಹೇರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...