ಕಾಬೂಲ್: ಆಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ನಂತರದಲ್ಲಿ ತಾಲಿಬಾನ್ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು 8 ತಿಂಗಳ ಗರ್ಭಿಣಿಯಾಗಿದ್ದ ಮಹಿಳಾ ಪೊಲೀಸಳನ್ನು ಕುಟುಂಬದವರ ಕಣ್ಣೆದುರಲ್ಲೇ ಅಮಾನವೀಯವಾಗಿ ಹತ್ಯೆ ಮಾಡಿದ್ದಾರೆ.
ಬಾನು ನೆಗರ್ ಮೃತಪಟ್ಟ ಮಹಿಳಾ ಪೊಲೀಸ್ ಎಂದು ಗುರುತಿಸಲಾಗಿದೆ. ಆಫ್ಘಾನಿಸ್ತಾನದ ಘೋರ್ ಪ್ರಾಂತ್ಯದ ರಾಜಧಾನಿ ಫಿರೋಜ್ ಕೋಹ್ ನ ನಿವಾಸದದಲ್ಲಿದ್ದ ಬಾನು ನೆಗರ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಟುಂಬದವರ ಎದುರಲ್ಲೇ ತಾಲಿಬಾನಿಗಳು ಕ್ರೌರ್ಯ ಮೆರೆದಿದ್ದಾರೆ.
ಗನ್ ಹಿಡಿದು ಮನೆಗೆ ನುಗ್ಗಿದ ಉಗ್ರರು ಮನೆಯವರನ್ನು ಕಟ್ಟಿಹಾಕಿದ್ದಾರೆ. ಬಾನು ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಇದೇ ರೀತಿ ಹಲವು ಕಡೆಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಹಿಂಸಾಚಾರ ನಡೆಸುತ್ತಿರುವ ತಾಲಿಬಾನ್ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ.